370 ರದ್ದತಿ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಮುಹೂರ್ತ

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ ಅಕ್ಟೋಬರ್ 1ರಂದು ಆರಂಭವಾಗಲಿದೆ. ನ್ಯಾ.ಎನ್.ವಿ ರಮಣ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಆಗಸ್ಟ್‍ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಲಾಗಿತ್ತು. ಇದ್ರ ಬೆನ್ನಲ್ಲೇ ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಈ ಕ್ರಮವನ್ನು ಖಂಡಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರಣೆಯನ್ನು ಈಗಾಗಲೇ ಆರಂಭಿಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ, ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದೆ. ಉಳಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಅಕ್ಟೋಬರ್ 1ರಿಂದ ವಿಚಾರಣೆ ನಡೆಸೋದಾಗಿ ರಮಣ ನೇತೃತ್ವದ ಪೀಠ ಹೇಳಿದೆ.

Contact Us for Advertisement

Leave a Reply