masthmagaa.com:

ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಗಳಿಗೆ ನಡೆಯುತ್ತಿರುವ ಮೊದಲ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಿದೆ. ಕೇಂದ್ರಾಡಳಿತ ಪ್ರದೇಶದ  280ಕ್ಷೇತ್ರಗಳಿಗೆ ಒಟ್ಟು 8 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೇ ಹಂತವಾದ ಇಂದು 43ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಜಮ್ಮ-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಮಧ್ಯಾಹ್ನ 2 ಗಂಟೆಗೆ ಮತದಾನ ಪ್ರಕ್ರಿಯೆ ಕೊನೆಯಾಗಿದೆ. 8 ಹಂತಗಳಲ್ಲಿ ನಡೆಯುವ ಈ ಚುನಾವಣೆ ಡಿಸೆಂಬರ್‌ 19ರಂದು ಮುಕ್ತಾಯಗೊಳ್ಳಲಿದ್ದು, ಡಿಸೆಂಬರ್‌ 22ಕ್ಕೆ ಮತ ಎಣಿಕೆ ನಡೆಯಲಿದೆ.

ನ್ಯಾಷನಲ್‌ ಕಾನ್ಫರೆನ್ಸ್‌, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಪೀಪಲ್ಸ್ ಕಾನ್ಫರೆನ್ಸ್ ಮತ್ತು ಸಿಪಿಐ (ಎಂ) ಗುಪ್ಕರ್ ಘೋಷಣೆಗಾಗಿ ರಚನೆಯಾಗಿರುವ ಪೀಪಲ್ಸ್ ಅಲಾಯನ್ಸ್ ಮೊದಲ ಡಿಡಿಸಿ ಚುನಾವಣೆಯಲ್ಲಿ  ಹೋರಾಟ ನಡೆಸುತ್ತಿವೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಕೂಡ ಕಣದಲ್ಲಿವೆ.

-masthmagaa.com

Contact Us for Advertisement

Leave a Reply