ರಾಜ್ಯದ 120 ತಾಲೂಕುಗಳಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ತಯಾರಿ!

masthmagaa.com:

ರಾಜ್ಯದಲ್ಲಿ ಮಳೆ ಕೊರತೆ ಫೇಸ್‌ ಮಾಡ್ತಿರುವ ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಅಂತ ಘೋಷಿಸೋಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಳೆ ಸಮೀಕ್ಷೆ ನಡೆಸಿ 10 ದಿನದೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗುವ ಅಪಾಯದಲ್ಲಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯವೇ ಬರ ಘೋಷಿಸಬೇಕಾಗಿದೆ. ಮಳೆ ಕೊರತೆ, ಒಣ ಹವೆ‌, ಬಿತ್ತನೆ ಪ್ರದೇಶ, ತೇವಾಂಶ ಕೊರತೆ, ಬೆಳೆಗಳ ಸ್ಥಿತಿ, ಜಲಾಶಯಗಳ ನೀರಿನ ಸಂಗ್ರಹಣೆ ಹಾಗೂ ಅಂತರ್ಜಲ ಮಟ್ಟವನ್ನು ಅವಲೋಕಿಸಿ ಬರ ಘೋಷಿಸಲಾಗುತ್ತದೆ. ರಾಜ್ಯದ ಸುಮಾರು 120 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, ಬರಪೀಡಿತ ಎಂದು ಘೋಷಿಸುವ ಮೊದಲು ಕೇಂದ್ರ ಸರ್ಕಾರದ ಸೂಚನೆಯಂತೆ ಬೆಳೆ ಸಮೀಕ್ಷೆ ಮಾಡ್ಬೇಕು ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply