ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ ಪಾನ್ ಇಂಡಿಯಾ ಸಿನಿಮಾಗೆ ಹೀರೋ ಆದ ಪ್ರಭುದೇವ!

masthmagaa.com:

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ ಮಾಡಿರುವ ಚಿತ್ರಗಳು ಸಾಕಷ್ಟು ಹೆಸರು‌
ಮಾಡಿದೆ. ಈಗ ಈ‌ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ಯಾನ್ ಇಂಡಿಯಾ ಸಿನಿಮಾವೊಂದು ನಿರ್ಮಾಣವಾಗಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ.

ಖ್ಯಾತ ಬಹುಭಾಷಾ ನಟ ಹಾಗೂ ತಮ್ಮ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯದಲ್ಲೇ ಈ ಚಿತ್ರದ ತಾರಾಬಳಗ ‌ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply