ತಮಿಳುನಾಡು, ಕೇರಳ ಆಂದ್ರ ಪ್ರದೇಶಕ್ಕೆ ಯೆಲ್ಲೋ ಅಲರ್ಟ್‌ ಜಾರಿ! ಕರ್ನಾಟಕದಲ್ಲೂ ಬರುತ್ತಾ ಮಳೆ?

masthmagaa.com:

ಬೇಸಿಗೆ ಆರಂಭದಲ್ಲೇ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಸಿಕ್ತಾಯಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ಮೈಸೂರು ಹಾಗೂ ಚಾಮರಾಜಗನರ ಜಿಲ್ಲೆಗಳಲ್ಲಿ ಕಳೆದ ವಾರ ಮಳೆ ಸುರಿದಿದ್ದು ಬೆಳೆ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ. ಇನ್ನು ತಮಿಳುನಾಡು, ಕೇರಳ ಹಾಗೂ ಆಂಧ್ರದ ಬಹುತೇಕ ಪ್ರದೇಶಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಉತ್ತರಖಾಂಡ್‌, ದೆಹಲಿ, ಪಂಜಾಬ್‌ ಭಾಗದಲ್ಲೂ ಮಳೆ ಮುನ್ಸೂಚನೆ ನೀಡಲಾಗಿದೆ.

-masthmagaa.com

Contact Us for Advertisement

Leave a Reply