ಪಿಎಸ್‌ಐ ನೇಮಕಾತಿ ಅಕ್ರಮ: ಮರುಪರೀಕ್ಷೆಗೆ ಆದೇಶ, ದಿವ್ಯಾ ಹಾಗರಗಿ ಅಂದರ್‌!

masthmagaa.com:

ರಾಜ್ಯದಲ್ಲಿ ಇತ್ತೀಚೆಗೆ ತುಂಬಾ ಸದ್ದು ಮಾಡ್ತಾ ಇರೋ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಇವತ್ತು ಮಹತ್ವದ ತಿರುವು ಪಡೆದುಕೊಂಡಿದೆ. 545 ಪಿಎಸ್‌ಐ ಹುದ್ದೆಗಳಿಗೆ ಕಳೆದ ವರ್ಷ ನಡೆಸಲಾದ ಪರೀಕ್ಷೆಯನ್ನ ಸಂಪೂರ್ಣ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಅಂತ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಹಿಂದೆ ನಡೆದಿದ್ದ ಪರೀಕ್ಷೆಯ ಫಲಿತಾಂಶವನ್ನ ರದ್ದು ಮಾಡಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರುಪರೀಕ್ಷೆ ನಡೆಸಲಾಗುವುದು ಅಂತ ಸುದ್ದಿಗೋಷ್ಠಿಯಲ್ಲಿ ಅವ್ರು ಹೇಳಿದ್ದಾರೆ. ಇನ್ನು ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪಿಗಳಿಗೆ ಮರುಪರೀಕ್ಷೆ ಬರೆಯುವ ಅವಕಾಶ ಇಲ್ಲ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು ಅಂತ ಹೇಳಿದ್ದಾರೆ. ಇನ್ನೊಂದ್‌ ಕಡೆ ಇಷ್ಟು ದಿನ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಐವರನ್ನ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ದಿವ್ಯಾ ಅವ್ರ ಒಡೆತನದ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಿತಾ ಮತ್ತು ದಿವ್ಯಾ ಅವ್ರಿಗೆ ಆಶ್ರಯ ನೀಡಿದ್ದ ಸೊಲ್ಲಾಪುರದ ವ್ಯಾಪಾರಿಗಳಾದ ಸುರೇಶ ಕಾಟೇಗಾಂವ ಮತ್ತು ಕಾಳಿದಾಸ ಅವ್ರನ್ನ ಬಂಧಿಸಲಾಗಿದೆ.

-masthmagaa.com

Contact Us for Advertisement

Leave a Reply