ಪುನೀತ್​​​ಗೆ ಬಸವಶ್ರೀ ಪ್ರಶಸ್ತಿ ಪ್ರದಾನ

masthmagaa.com:

ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಡಾ. ಪುನೀತ್ ರಾಜ್​ಕುಮಾರ್ ಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಪತಿಯ ಪರವಾಗಿ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಮರಣೋತ್ತರ ಬಸವಶ್ರೀ ಪ್ರಶಸ್ತಿಯನ್ನ ಸ್ವೀಕರಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ನಂತರ ಮುರುಘಾ ಮಠದ ಶ್ರೀಗಳ ಕೋರಿಕೆಯಂತೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಶ್ರೀಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಅವರು ಭಾವುಕರಾಗಿದ್ದಾರೆ.

-masthmagaa.com

Contact Us for Advertisement

Leave a Reply