ಚಂದನ್‌ ಶೆಟ್ಟಿಗೆ ಜೋಡಿಯಾಗಿ ಹೆಜ್ಜೆಹಾಕಿದ ರಾಗಿಣಿ..!

masthmagaa.com:

ಸುಜಯ್‌ ಶಾಸ್ತ್ರಿ ನಿರ್ದೇಶನದ ʻಎಲ್ರ ಕಾಲೆಳಿಯತ್ತೆ ಕಾಲʼ ಸಿನಿಮಾದಲ್ಲಿ ಚಂದನ್‌ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಪ್ರಮೋಷನಲ್ ಸಾಂಗ್‌ ಇತ್ತೀಚೆಗೆ ಆನಂದ್‌ ಆಡಿಯೋ ಮೂಲಕ ರಿಲೀಸ್‌ ಆಯಿತು. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು. ಈ ಪ್ರಮೋಷನ್‌ ಸಾಂಗ್‌ನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ ಹೆಜ್ಜೆ ಹಾಕಿದ್ದಾರೆ.ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ‌.ಈ ಹಾಡು ಚೆನ್ನಾಗಿದೆ. ತುಂಬಾ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನಲ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ನಟಿ ರಾಗಿಣಿ ದ್ವಿವೇದಿ ಚಿತ್ರಕ್ಕೆ ಶುಭ ಕೋರಿದರು.

ನಾನು ಕೆಂಪೇಗೌಡ ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲ್ಲಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ. ಇನ್ನೂ ಸಿನಿಮಾ ಕುರಿತು ಮಾತನಾಡಿದ ನಿರ್ದೇಶಕ ಸುಜಯ್‌ ಶಾಸ್ತ್ರಿ ʻಈ ಸಿನಿಮಾ 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣ ಮಾಡಿದ್ದಕ್ಕಾಗಿ ಗೋವಿಂದರಾಜು ಅವರಿಗೂ ಹಾಗೂ ಸಿನಿಮಾಕ್ಕೇ ಕೈಜೋಡಿಸಿದ ಚಿತ್ರತಂಡಕ್ಕೇ ಧನ್ಯವಾದಗಳು ಎಂದರು.

-masthmagaa.com

Contact Us for Advertisement

Leave a Reply