ಮೋದಿ ಕಳ್ಳ ಹೇಳಿಕೆ ಕೇಸ್..! ತಪ್ಪು ಒಪ್ಪದ ರಾಗಾ..!

ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಕಳ್ಳ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ ಇವತ್ತು, ಸೂರತ್‍ನ ಕೋರ್ಟ್‍ಗೆ ಹಾಜರಾಗಿದ್ದಾರೆ.

ಪ್ರಧಾನಿ ಮೋದಿಯವರನ್ನು ಕಳ್ಳ ಎಂದಿದ್ದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ನೀವು ನಿಮ್ಮ ತಪ್ಪನ್ನು ಒಪ್ಪಿಕೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧದ ಈ ಪ್ರಕರಣವನ್ನು ಕೈ ಬಿಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಡಿಸೆಂಬರ್ 10ರಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ಕುರಿತು ನಿರ್ಧರಿಸಲಿದೆ.

ಲೋಕಸಭೆ ಚುನಾವಣೆ ವೇಳೆ ಮಾತನಾಡಿದ್ದ ರಾಹುಲ್ ಗಾಂಧಿ, ಎಲ್ಲಾ ಕಳ್ಳರ ಹೆಸರಿನ ಕೊನೆಯಲ್ಲಿ ಮೋದಿ ಎಂದು ಯಾಕೆ ಇದೆ..? ಎಂದು ಹೆಳಿದ್ದರು. ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.

Contact Us for Advertisement

Leave a Reply