masthmagaa.com:

‘ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷ ರಾಹುಲ್ ಗಾಂಧಿಯೇ’ ಅಂತ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ‘ಶೀಘ್ರದಲ್ಲೇ ಕಾಂಗ್ರೆಸ್ ಅಧ್ಯಕ್ಷರನ್ನ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಬೆಸ್ಟ್ ಆದವರನ್ನೇ ಕಾಂಗ್ರೆಸ್​ನ ಎಲೆಕ್ಟೊರಲ್ ಕಾಲೇಜ್, AICC ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸದಸ್ಯರು ಆಯ್ಕೆ ಮಾಡಲಿದ್ದಾರೆ. ನಾನೂ ಸೇರಿದಂತೆ ಶೇ. 99.9ರಷ್ಟು ಜನ ರಾಹುಲ್ ಗಾಂಧಿಯನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಬಯಸಿದ್ದೇವೆ’ ಅಂತ ಸುರ್ಜೇವಾಲಾ ಹೇಳಿದ್ದಾರೆ. 2019 ಲೋಕಸಭೆ ಚುನಾವಣೆಗೂ ಮುನ್ನ ಅಂದ್ರೆ 2017ರಲ್ಲಿ ರಾಹುಲ್​ ಗಾಂಧಿಯನ್ನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದ್ರೆ ಚುನಾವಣೆಲ್ಲಾದ ಸೋಲಿನ ಜವಾಬ್ದಾರಿ ಹೊತ್ತು ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಬಳಿಕ ಸೋನಿಯಾ ಗಾಂಧಿಯನ್ನ ಮಧ್ಯಂತರ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಮತ್ತೆ ರಾಹುಲ್ ಗಾಂಧಿಯನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.

-masthmagaa.com

Contact Us for Advertisement

Leave a Reply