ಚೀನಾ ‘ಸ್ಟ್ಯಾಂಡರ್ಡ್ ಮ್ಯಾಪ್’ ರಿಲೀಸ್‌ ಬೆನ್ನಲ್ಲೇ ಕೇಂದ್ರದ ಮೇಲೆ ಮುಗಿಬಿದ್ದ ವಿಪಕ್ಷಗಳು!

masthmagaa.com:

ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಭೂಪ್ರದೇಶದ ಭಾಗವಾಗಿ ತೋರಿಸುವ ‘ಸ್ಟ್ಯಾಂಡರ್ಡ್ ಮ್ಯಾಪ್’ ಅನ್ನು ಚೀನಾ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವುತ್, ಲಡಾಖ್‌ನ ಪ್ಯಾಂಗಾಂಗ್ ಕಣಿವೆಗೆ ಚೀನಾ ಸೇನೆ ಪ್ರವೇಶಿಸಿದೆ ಅಂತ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆ ನಿಜವಾಗಿದೆ. ಕೇಂದ್ರ ಸರ್ಕಾರಕ್ಕೆ ಧೈರ್ಯವಿದ್ದರೆ ಚೀನಾ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ಮಾಡಲಿ ಅಂತ ಸವಾಲು ಹಾಕಿದ್ದಾರೆ. ಇತ್ತ ಇದೇ ವಿಚಾರವಾಗಿ ಕಾಂಗ್ರೆಸ್‌ ಕೂಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಧಾನಿ ಮೋದಿಯವರು ಇತ್ತೀಚೆಗೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಎಲ್‌ಎಸಿಇ ವಿಚಾರವಾಗಿ ಮೋದಿಯವರು ಕಟುವಾಗಿ ಮಾತನಾಡಿದ್ದಾರೆ ಅಂತ ಹೇಳಲಾಗಿತ್ತು. ಆದರೆ, ಈ ಸಭೆ ನಡೆದ ಕೇವಲ ನಾಲ್ಕು ದಿನಗಳಲ್ಲಿ, ಚೀನಾ ನಕ್ಷೆ ಬಿಡುಗಡೆ ಮಾಡಿದೆ. ಅರುಣಾಚಲ, ಅಕ್ಸಾಯ್ ಚಿನ್ ತನ್ನ ಭೂ ಭಾಗ ಅಂತ ಹೇಳಿಕೊಂಡಿದೆ. ಹಾಗಿದ್ದರೆ, ಚೀನಾದ ಕಾನೂನುಬಾಹಿರ ವರ್ತನೆಯನ್ನು ನಿಯಂತ್ರಿಸಲಾಗದ ಅದ್ಯಾವ ರೀತಿಯ ಕಠಿಣ ರೀತಿಯಲ್ಲಿ ಮೋದಿ ಮಾತನಾಡಿದ್ದಾರೆ? ಅಂತ ಕಾಂಗ್ರೆಸ್ ಪ್ರಶ್ನಿಸಿದೆ.

-masthmagaa.com

Contact Us for Advertisement

Leave a Reply