masthmagaa.com:

ಬಂಗಾಳ ಕೊಲ್ಲಿಯ ಮಧ್ಯಭಾಗದಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು ಮುಂದಿನ ಎರಡು ದಿನಗಳಲ್ಲಿ ಉತ್ತರ ಪಶ್ಚಿಮ ಭಾಗದ ಕಡೆಗೆ ಸಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಳಿಕ ಈ ವಾಯುಭಾರ ಕುಸಿತದ ದಿಕ್ಕು ಉತ್ತರ ಪೂರ್ವದ ಕಡೆ ತಿರುಗಲಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದ್ರಲ್ಲೂ ತೆಲಂಗಾಣ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 22ರಂದು ಮತ್ತು ಈಶಾನ್ಯ ಭಾರತದ ರಾಜ್ಯಗಳಲ್ಲಿ ಅಕ್ಟೋಬರ್ 22ರಿಂದ 24ರವರೆಗೆ ಭಾರಿ ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವೆಡೆ ಮುಂದಿನ ಕೆಲ ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಆದ್ರೆ ಇತ್ತೀಚೆಗೆ ಸುರಿದಂತೆ ಸುರಿಯುವ ಸಾಧ್ಯತೆ ಕಡಿಮೆ ಇದೆ. ಮೊನ್ನೆಯ ವಾಯುಭಾರ ಕುಸಿತವು ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ ದಾಟಿ ಅರಬ್ಬೀ ಸಮುದ್ರದಲ್ಲಿ ದುರ್ಬಲಗೊಂಡಿತ್ತು. ಆದ್ರೆ ಈ ಬಾರಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳನ್ನು ದಾಟಿ ಹೋಗಲಿದೆ.

-masthmagaa.com

Contact Us for Advertisement

Leave a Reply