ರಾಜ್ಯದ ಈ ಭಾಗಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ

masthmagaa.com:

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಕೂಡ ಭಾರಿ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗ ಮತ್ತು ಬೆಂಗಳೂರಿನಲ್ಲಿ ಮಳೆ ಮುಂದುವರಿಯಲಿದೆ ಅಂತ ಭಾರತೀಯ ಹವಾಮಾನ ಇಲಾಖೆಯ (Indian Meteorological Department-IMD) ಬೆಂಗಳೂರು ಘಟಕ ತಿಳಿಸಿದೆ. ಐಎಂಡಿ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರಗಳಲ್ಲೂ ಇದು ಗೋಚರವಾಗುತ್ತಿದೆ.

ಅತ್ತ ವಾಯುಭಾರ ಕುಸಿತದ ಎಫೆಕ್ಟ್​ ಪಶ್ಚಿಮಬಂಗಾಳಕ್ಕೆ ಜೋರಾಗಿ ತಟ್ಟಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಅಕ್ಟೋಬರ್ 25ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಆಲ್ರೆಡಿ ಸಮುದ್ರದಲ್ಲಿರುವ ದೋಣಿಗಳು ವಾಪಸ್ ಬರುವಂತೆ ಸೂಚಿಸಲಾಗಿದೆ.

-masthmagaa.com

Contact Us for Advertisement

Leave a Reply