masthmagaa.com:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ 24 ಗಂಟೆಯಲ್ಲಿ ಇದು ಚಂಡಮಾರುತದ ರೂಪ ಪಡೆಯುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಪರಿಣಾಮ ತಮಿಳುನಾಡು, ಪುದುಚೆರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ನವೆಂಬರ್ 23ರಿಂದ 25ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರದ ಕರಾವಳಿ ಪ್ರದೇಶ, ರಾಯಲಸೀಮ ಮತ್ತು ತೆಲಂಗಾಣದಲ್ಲಿ ನವೆಂಬರ್ 25ರಿಂದ 26ರವರೆಗೆ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ. ನವೆಂಬರ್ 25ರಂದು ಈ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

-masthmagaa.com

Contact Us for Advertisement

Leave a Reply