masthmagaa.com:

ಭಾರಿ ವರ್ಷಧಾರೆಗೆ ತತ್ತರಿಸಿರುವ ಕರ್ನಾಟಕದಲ್ಲಿ ಅಕ್ಟೋಬರ್ 19ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಅಕ್ಟೋಬರ್ 16ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಉಡುಪಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಅಕ್ಟೋಬರ್ 17ರಿಂದ 19ರವರೆಗೆ ಕರಾವಳಿ ಭಾಗದಲ್ಲಿ ಚದುರಿದ ಮಳೆಯಾಗಲಿದೆ.

ಇನ್ನು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ 19ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಅಕ್ಟೋಬರ್ 19ರವರೆಗೆ ಅಲ್ಲಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply