masthmagaa.com:

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಹಲವೆಡೆ ಮುಂದಿನ 24 ಗಂಟೆಗಳ ಕಾಲ ಸಣ್ಣ ಮತ್ತು ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನ ಅಲ್ಲಲ್ಲಿ ಚದುರಿದಂತೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ KSNDMC ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply