masthmagaa.com:

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಳೆಯಾಗಲಿದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಬೆಂಗಳೂರು ನಗರ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ ಮತ್ತು ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಅಂತಾನೂ KSNDMC ಹೇಳಿದೆ. ಬೆಂಗಳೂರಿನ ಹಲವೆಡೆ ಇವತ್ತು ತುಂತುರು ಮಳೆಯಾಗಿದೆ.

-masthmagaa.com

Contact Us for Advertisement

Leave a Reply