masthmagaa.com:

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 2 ದಿನಗಳ ಕಾಲ ಸಣ್ಣ ಮತ್ತು ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ಅದೇ ರೀತಿ ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದಲ್ಲಿ ವ್ಯಾಪಕ ಅಥವಾ ತುಂತುರು ಮಳೆಯಾಗಲಿದೆ ಅಂತ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಅಂತ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply