ರಾಜ್ಯದ ಈ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ..!

masthmagaa.com:

ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಜೊತೆಗೆ ದಕ್ಷಿಣ ಒಳನಾಡು ಭಾಗದ ಕೆಲವೆಡೆಯೂ ಭಾರಿ ವರ್ಷಧಾರೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಅಲ್ಲಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ನಾಳೆವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ ಅಂತ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply