masthmagaa.com:

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಭಾಗ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರದಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ ನಮ್ಮ ಪಕ್ಕದ ತಮಿಳುನಾಡು ಮತ್ತು ಕೇರಳದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

-masthmagaa.com

Contact Us for Advertisement

Leave a Reply