masthmagaa.com:

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 20 ಮತ್ತು​ 23ರಂದು ಭಾರಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ  ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಸಣ್ಣ ಪ್ರಮಾಣದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಂದಾಜಿಸಿದೆ.

-masthmagaa.com

Contact Us for Advertisement

Leave a Reply