masthmagaa.com:

ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ನವೆಂಬರ್ 17ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರ್ನಾಟದ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಹೇಳಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದ್ದು, ಮುಂದಿನ 2 ದಿನಗಳ ಕಾಲ ಬೆಳಗಿನಜಾವ ಮಂಜು ಬೀಳುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರದಲ್ಲೂ ಮಳೆಯಾಗುವ ಸಾಧ್ಯತೆ ಕಾಣುತ್ತಿದೆ.

-masthmagaa.com

Contact Us for Advertisement

Leave a Reply