masthmagaa.com:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ‘ನಿವಾರ್’ ಚಂಡಮಾರುತದಿಂದಾಗಿ ತಮಿಳುನಾಡು, ಪುದುಚೆರಿ ಮತ್ತು ಕಾರೈಕಲ್​ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಈ ಚಂಡಮಾರುತವು ಮತ್ತಷ್ಟು ವೇಗ ಪಡೆಯಲಿದ್ದು ಭಾರಿ ಮಳೆಯಾಗುವ ಸಾಧ್ಯತೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈನಲ್ಲಿ ಈಗಾಗಲೇ ಮಳೆಯ ಆರ್ಭಟ ಶುರುವಾಗಿದೆ. ‘ನಿವಾರ್’ ಚಂಡಮಾರುತದ ಎಫೆಕ್ಟ್ ಕರ್ನಾಟಕದಲ್ಲೂ ಕಾಣಿಸಿಕೊಳ್ಳಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಅಂದ್ರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು. ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

-masthmagaa.com

Contact Us for Advertisement

Leave a Reply