ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಯ್ತು..? ಹವಾಮಾನ ವರದಿ ಹೇಗಿದೆ?

masthmagaa.com:

ರಾಜ್ಯದ ಕೆಲವೊಂದು ಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ಅತಿಹೆಚ್ಚು 135 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೊಂದುಕಡೆ ಭಾರಿ ಮಳೆ ಮತ್ತು ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದುಕಡೆ ಸಾಧಾರಣ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply