ರಾಜ್ಯಕ್ಕೆ ಮತ್ತೆ ಮಳೆ ಶಾಕ್​! ಹವಾಮಾನ ಇಲಾಖೆ ಹೇಳಿದ್ದೇನು?

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಯಾದಗಿರಿ ತಾಲೂಕಿನಲ್ಲಿ ಅತಿಹೆಚ್ಚು 81.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೊಂದುಕಡೆ ಭಾರಿ ಮಳೆ, ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ರೀತಿಯ ಪರಿಸ್ಥಿತಿ ನಿರ್ಮಾಣವಾಗ್ತಿರೋ ಹಿನ್ನೆಲೆ, ನಾಳೆಯಿಂದ 5 ದಿನಗಳ ಕಾಲ ಆಂಧ್ರ, ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಇದೆ. ಜೊತೆಗೆ ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ ನಾಲ್ಕೈದು ದಿನ ಮಳೆಯಾಗೋ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇತ್ತೀಚೆಗೆ ಮಳೆ ಮಾಡಿ ಹೋದ ಅವಾಂತರಗಳು ಇನ್ನು ಕಣ್ಣಮುಂದೆನೇ ಇದೆ. ಇದರ ನಡುವೆ ಮತ್ತೆ ಮಳೆ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ.

-masthmagaa.com

Contact Us for Advertisement

Leave a Reply