ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಯ್ತು..? ಕೇರಳ ಹವಾಮಾನ ಹೇಗಿದೆ?

masthmagaa.com:

ರಾಜ್ಯದ ಕೆಲವೊಂದು ಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಎಂ.ಬಿ. ಹಳ್ಳಿಯಲ್ಲಿ ಅತಿಹೆಚ್ಚು 77 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಒಣಹವೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಅತ್ತ ನಮ್ಮ ಪಕ್ಕದ ಕೇರಳದಲ್ಲಿ ಮತ್ತೆ ಮಳೆರಾಯ ಆರ್ಭಟಿಸೋ ಲಕ್ಷಣ ಕಾಣಿಸ್ತಿದೆ. ಅಕ್ಟೋಬರ್ 20ನೇ ತಾರೀಖು ಕೇರಳದ ತಿರುವನಂತಪುರಂ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್​, ಪಲಕ್ಕಾಡ್​, ಮಲಪ್ಪುರಂ, ಕೋಯಿಕ್ಕೋಡ್​, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಕಾಸರಗೋಡು, ಅಲಪ್ಪುಳ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply