ಬೆಂಗಳೂರಿನಲ್ಲಿ ಮತ್ತೆರಡು ದಿನ ಮಳೆ ಸಾಧ್ಯತೆ!

masthmagaa.com:

ರಾಜ್ಯ ರಾಜಧಾನಿಯಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಳಿಗಾಳಿಯ ಕಾರಣ ಪೂರ್ವ ಮುಂಗಾರಿಗೂ ಮುನ್ನ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ 15.5 ರಿಂದ 60.0 ಮಿಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಮಲೆನಾಡುಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮಳೆ ಆಗುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಹೇಳಿದೆ.

-masthmagaa.com

Contact Us for Advertisement

Leave a Reply