ಮಧ್ಯಪ್ರದೇಶದಲ್ಲಿ ಏಳು ಮಂದಿ ಧಾರುಣ ಸಾವು

ಫ್ಲೈಓವರ್ ಮೇಲಿಂದ ಬಸ್ ಉರುಳಿ ಕಾಲುವೆಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ರೈಸನ್ ಬಳಿ ಈ ಘಟನೆ ನಡೆದಿದೆ. ಒಟ್ಟು 36 ಮಂದಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಸ್ ರೈಸನ್ ನಿಂದ ಛತ್ತರ್‍ಪುರಕ್ಕೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಅಗ್ನಿಶಾಮಕ ದಳ ಕೂಡ ಇನ್ನೂ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Contact Us for Advertisement

Leave a Reply