ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆಯನ್ನ ವಿರೋಧಿಸಿದ ರಾಜಸ್ಥಾನ!

masthmagaa.com:

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ಕೇಸ್‌ ವಿಚಾರಣೆಯನ್ನ ಸುಪ್ರೀಂಕೋರ್ಟ್‌ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ರಾಜ್ಯಗಳ ಅಭಿಪ್ರಾಯ ಪಡೆಯೋದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೇಳಿತ್ತು. ಇದೀಗ ಈ ವಿಷಯವಾಗಿ 7 ರಾಜ್ಯಗಳಿಂದ ಉತ್ತರಗಳನ್ನು ಸ್ವೀಕರಿಸಲಾಗಿದೆ ಅಂತ ಕೇಂದ್ರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅದ್ರಲ್ಲಿ ರಾಜಸ್ಥಾನ ಸಲಿಂಗ ವಿವಾಹದ ಕಲ್ಪನೆಯನ್ನು ವಿರೋಧಿಸಿದೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ಮಣಿಪುರ, ಅಸ್ಸಾಂ ಮತ್ತು ಸಿಕ್ಕಿಂ ಈ ಕುರಿತು ಪರಿಶೀಲನೆ ನಡೆಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದಿವೆ ಅಂತ ಕೇಂದ್ರ ಹೇಳಿದೆ. ಇತ್ತ ಸಲಿಂಗ ವಿವಾಹಗಳ ಕಾನೂನು ಮಾನ್ಯತೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಿಂದ ಸಿಜೆಐ ಡಿವೈ ಚಂದ್ರಚೂಡ್ ಅವ್ರು ಹಿಂದೆ ಸರಿಯುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದ್ರೆ ಈ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

-masthmagaa.com

Contact Us for Advertisement

Leave a Reply