ಒಂದೇ ತಿಂಗಳ ಅಂತರದಲ್ಲಿ ರಕ್ಷಿತ್‌ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ರಿಲೀಸ್‌ !

masthmagaa.com:

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಮೊದಲೇ ಹೇಳಿದಂತೆ ಡೈರೆಕ್ಟರ್ ಹೇಮಂತ್ ರಾವ್ ಹಾಗೂ ನಟ ರಕ್ಷಿತ್ ಶೆಟ್ಟಿ ಸಿನಿಮಾ ಎರಡೂ ಪಾರ್ಟ್‌ಗಳ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡು ಭಾಗಗಳು ರಿಲೀಸ್ ಆಗ್ತಾ ಇದೆ. ಒಂದು ತಿಂಗಳ ಅಂತರದಲ್ಲಿಯೇ ಈ ಎರಡೂ ಸಿನಿಮಾ ರಿಲೀಸ್ ಇದ್ದು, ಸೆಪ್ಟೆಂಬರ್-1 ರಂದು ಸಪ್ತ ಸಾಗರದಾಚೆ ಎಲ್ಲೋ ಸೈಡ್‌-A ಸಿನಿಮಾ ರಿಲೀಸ್ ಆದ್ರೆ, ಅಕ್ಟೋಬರ್‌ 20ರಂದು ಸೈಡ್‌ B ರಿಲೀಸ್ ಆಗ್ತಾ ಇದೆ. ಇನ್ನು ಈ ಚಿತ್ರದ ಎರಡೂ ಭಾಗದ ಚಿತ್ರೀಕರಣ ಮತ್ತು ಇತರ ಕೆಲಸ ಮುಕ್ತಾಯವಾಗಿದೆ. ಸಿನಿಮಾದ ಎರಡೂ ಭಾಗಗಳು ರಿಲೀಸ್‌ ಆಗೋಕೆ ರೆಡಿಯಾಗಿ ನಿಂತಿದೆ.

ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಎರಡು ಭಾಗವನ್ನ ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡೋದಿಲ್ಲ. ಆದರೆ ಹೆಚ್ಚು ಅಂತರದಲ್ಲಿ ರಿಲೀಸ್ ಕೂಡ ಮಾಡೋದಿಲ್ಲ. ಬೇಗನೇ ಈ ಚಿತ್ರ ತರುತ್ತೇವೆ ಎಂದು ಡೈರೆಕ್ಟರ್ ಹೇಮಂತ್ ರಾವ್ ಹೇಳಿದ್ರು. ಹಾಗೇನೆ ಒಂದು ತಿಂಗಳ ಅಂತರದಲ್ಲಿ ಸಿನಿಮಾದ ಎರಡೂ ಭಾಗಗಳು ಇದೇ ವರ್ಷ ರಿಲೀಸ್ ಆಗ್ತಾ ಇದೆ.

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಮತ್ತು ವಿತರಣೆ ಸಂಸ್ಥೆಯಾದ ಕೆ.ವಿ.ಎನ್. ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ. ‘ಕವಲು ದಾರಿ’ ನಂತರ ಹೇಮಂತ್ ರಾವ್ ನಿರ್ದೇಶಿಸಿರುವ ಚಿತ್ರ “ಸಪ್ತ ಸಾಗರದಾಚೆ ಎಲ್ಲೋ”. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದೆ. ಈಗ ಚಿತ್ರದ ಬಿಡುಗಡೆ ದಿನಾಂಕದ ಘೋಷಣೆಯಾಗಿದೆ. ಇಲ್ಲಿಂದ ಚಿತ್ರದ ಪ್ರಚಾರದ ಕೆಲಸಗಳು ಪ್ರಾರಂಭವಾಗಲಿವೆ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರ ಪಾತ್ರ ಎರಡು ಶೇಡ್ ಗಳಲ್ಲಿರುತ್ತದೆ. ಎರಡು ಕಾಲಘಟ್ಟಗಳಲ್ಲಿ ಕಥೆ ನಡೆಯಲಿದೆ. ರಕ್ಷಿತ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ಗೋಪಾಲಕೃಷ್ಣ ದೇಶಪಾಂಡೆ, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ.
ನಟನೆಯ ಜೊತೆಗೆ ರಕ್ಷಿತ್ ಶೆಟ್ಟಿ “ಸಪ್ತ ಸಾಗರದಾಚೆ ಎಲ್ಲೋ” – ಸೈಡ್ A ಮತ್ತು B’ ಚಿತ್ರಗಳನ್ನು ಪರಂವಃ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ. ಹೇಮಂತ್ ರಾವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

-masthmagaa.com

Contact Us for Advertisement

Leave a Reply