ಬೆಳಗಾವಿ `ಸಾಹುಕಾರ’ನ ಸಭೆ..! ಯಾಕೆ ಗೊತ್ತಾ..?

15 ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು 4 ದಿನ ಬಾಕಿ ಉಳಿದಿದೆ. ಈ ನಡುವೆ ಇವತ್ತು ಸುಪ್ರೀಂಕೋಟ್‍ನಲ್ಲಿ ಅನರ್ಹರ ಅರ್ಜಿ ವಿಚಾರಣೆಗೆ ಬರಲಿದೆ. ಹೀಗಾಗಿ ಗೋಕಾಕ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಇವತ್ತು ಬೆಂಬಲಿಗರ ಸಭೆ ಕರೆದಿದ್ದಾರೆ. ಗೋಕಾಕ್‍ನ ನಿವಾಸದಲ್ಲಿ ನಡೆಯೋ ಸಭೆಯಲ್ಲಿ ಬಿಜೆಪಿ ಸೇರ್ಪಡೆ ಮತ್ತು ನಾಮಪತ್ರ ಸಲ್ಲಿಕೆ ಬಗ್ಗೆ ಚರ್ಚೆ ನಡೆಸಲಾಗುತ್ತೆ ಅಂತ ಹೇಳಲಾಗುತ್ತಿದೆ. ಸುಪ್ರೀಂಕೋರ್ಟ್‍ನಲ್ಲಿ ತೀರ್ಪು ಅನರ್ಹ ಶಾಸಕರ ಪರವಾಗಿ ಬಂದರೆ ಸೋಮವಾರ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಹಲವು ಬಿಜೆಪಿ ಬೆಂಬಲಿಗರು ಜೊತೆಯಲ್ಲಿ ಇರಲಿದ್ದಾರೆ.

Contact Us for Advertisement

Leave a Reply