ಕಾಂಗ್ರೆಸ್‌ನಲ್ಲಿ ಭಿನ್ನಮತ ಹೇಳಿಕೆ: ʻಕೈʼನಾಯಕರ ಬಾಯಿ ಮುಚ್ಚಿಸಿದ ಹೈಕಮಾಂಡ್‌!

masthmagaa.com:

ರಾಜ್ಯ ಕಾಂಗ್ರೆಸ್​​ನಲ್ಲಿ ಆಂತರಿಕ ಕಲಹ, ಅಸಮಾಧಾನ, ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರೋ ಹಿನ್ನಲೆಯಲ್ಲಿ ಕೈ ನಾಯಕರಿಗೆ ಹೈಕಮಾಂಡ್‌ ಕ್ಲಾಸ್‌ ತೆಗೆದುಕೊಂಡಿದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ದು, ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಬಳಿಕ ಮಾತಾಡಿರುವ ಸುರ್ಜೇವಾಲ, ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಲಿಮಿಟ್‌ ಕ್ರಾಸ್‌ ಮಾಡಿ ಯಾರಾದ್ರೂ ಹೇಳಿಕೆ ಕೊಟ್ರೆ ಶಿಸ್ತು ಕ್ರಮ ಜರುಗಿಸುತ್ತೇವೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply