masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,17,353 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 1,185 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 42 ಲಕ್ಷದ 91 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,74,308 ಆಗಿದೆ.

ಕಳೆದ 24 ಗಂಟೆಗಳಲ್ಲಿ 1,18, 302 ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 25 ಲಕ್ಷದ 47 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 15 ಲಕ್ಷದ 69 ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 87.80 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.22 ಪರ್ಸೆಂಟ್ ಇದೆ. ಏಪ್ರೀಲ್‌ 15 ರಂದು 14.73 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 26.34 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 27.30 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 11.72 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply