ರಾಜ್ಯಾದ್ಯಂತ ಮುಂದುವರೆದ ಮಳೆ ಆರ್ಭಟ! ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ!

masthmagaa.com:

ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದ್ರಲ್ಲೂ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಯಾದ ಚಿಕ್ಕಮಗಳೂರಲ್ಲಿ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಅಲ್ದೆ ಉತ್ತರ ಒಳನಾಡಿನ ಬೆಳಗಾವಿಯಲ್ಲೂ ಭಾರಿ ಮಳೆಯಾಗೋ ಸಾಧ್ಯತೆಯಿದ್ದು, 2 ದಿನಗಳ ಅರೆಂಜ್‌ ಅಲರ್ಟ್‌ ನೀಡಲಾಗಿದೆ. ಇತ್ತ ದಾವಣಗೆರೆಯಲ್ಲಿ ನಿರಂತರ ಕುಂಭದ್ರೋಣ ಮಳೆ ಪರಿಣಾಮದಿಂದ ಮನೆ ಗೋಡೆ ಕುಸಿದು ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ವಿಜಯಪುರ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಚಾವಣಿ ಕುಸಿದು ಓರ್ವ ವೃದ್ದೆ ಮೃತಪಟ್ಟಿದ್ದಾರೆ. ಆ ಕಡೆ ಕೊಪ್ಪಳ ನಗರ ಸೇರಿ‌ ಜಿಲ್ಲಾದ್ಯಂತ ಕಳೆದ‌ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇತ್ತ ರಾಜ್ಯದಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಸಚಿವರ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತೊಂದ್‌ ಕಡೆ ಉತ್ತರ ಭಾರತದಲ್ಲೂ ಭಾರಿ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.

-masthmagaa.com

Contact Us for Advertisement

Leave a Reply