ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರೇವಣ್ಣ ಕೆಂಡ

ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು ಲಕ್ಷಾಂತರ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿವೆ. ಆದ್ರೆ ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂಪಾಯಿ ಪರಿಹಾರ ನೀಡಿದೆ ಎಂದು ಮಾಜಿ ಸಚಿವ ರೇವಣ್ಣ ಕೆಂಡಕಾರಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, 38 ಸಾವಿರ ಕೋಟಿ ಪರಿಹಾರ ಕೇಳಿದ್ರೂ ಕೇಂದ್ರ 1200 ಕೋಟಿ ರೂಪಾಯಿ ಪರಿಹಾರ ನೀಡಿದೆ. ಇದರಲ್ಲಿ ಯಾರ ತಪ್ಪಿದೆ ಎಂದು ಸಿಎಂ ಯಡಿಯೂರಪ್ಪನವರೇ ಹೇಳಬೇಕು. ರಾಜ್ಯ ಸರ್ಕಾರ 2.5 ಲಕ್ಷ ಮನೆಗಳಿಗೆ ಹಾನಿಯಾಗಿದೆ ಅಂತ ಹೇಳ್ತಿದ್ರೆ, ಕೇಂದ್ರ ಸರ್ಕಾರ 1.25 ಲಕ್ಷ ಮನೆಗಳಿಗೆ ಹಾನಿಯಾಗಿದೆ ಅಂತ ಹೇಳುತ್ತಿದೆ. ರಾಜ್ಯದಲ್ಲಾದ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅಲ್ಪಪ್ರಮಾಣದ ಅನುದಾನ ಪಡೆದು ಏನು ಮಾಡೋದು..? ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಹೀಗಾಗಿ ರಾಜ್ಯದ ಪ್ರವಾಹಕ್ಕೆ ಕೇಂದ್ರ ಸರ್ಕಾರವೇ ಸ್ಪಂದಿಸಲಿ ಎಂದು ಹೇಳಿದ್ದಾರೆ.

Contact Us for Advertisement

Leave a Reply