ಸುಶಾಂತ್ ಸಿಂಗ್ ಪ್ರಕರಣದಲ್ಲಿ ನಟಿ ರಿಹಾ ಚಕ್ರಬರ್ತಿ ಬಂಧನ

masthmagaa.com:

ಬಾಲಿವುಡ್ ನಟಿ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಪ್ರೇಯಸಿ ರಿಹಾ ಚಕ್ರಬರ್ತಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ (NCB) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಸತತ ಮೂರು ದಿನಗಳಿಂದ ರಿಹಾ ಚಕ್ರಬರ್ತಿಯನ್ನು ಎನ್​ಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಅವರನ್ನು ಬಂಧಿಸಲಾಗಿದೆ ಅಂತ ಎನ್​ಸಿಬಿ ಉಪ ನಿರ್ದೇಶಕ ಕೆ.ಪಿ.ಎಸ್. ಮಲ್ಹೋತ್ರಾ ತಿಳಿಸಿದ್ದಾರೆ.

ಅಂದ್ಹಾಗೆ ಸುಶಾಂತ್ ಸಾವಿನ ಪ್ರಕರಣದಲ್ಲಿ ಮಾದಕ ವಸ್ತು ಜಾಲದ ಆಯಾಮ ಬಗ್ಗೆ ಎನ್​ಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ರಿಹಾ ಅವರ ಸಹೋದರ ಶೌವಿಕ್ ಚಕ್ರಬರ್ತಿಯನ್ನು ಈಗಾಗಲೇ ಬಂಧಿಸಲಾಗಿದೆ. ಇದೀಗ ರಿಹಾಳ ಬಂಧನ ಕೂಡ ಆಗಿರೋದು ಸಾಕಷ್ಟು ಕುತೂಹಲ ಕೆರಳಿಸಿದೆ.

-masthmagaa.com

Contact Us for Advertisement

Leave a Reply