ಅಕ್ಕಿ ಪಾಲಿಟಿಕ್ಸ್:‌ ಪ್ರಧಾನಿ ಮೋದಿಯನ್ನ ಭೇಟಿಯಾಗಲಿದ್ದಾರಾ ಸಿದ್ದರಾಮಯ್ಯ?

masthmagaa.com:

ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಕೊರತೆ ಎದುರಾಗಿದೆ. ಅಕ್ಕಿ ಪೂರೈಕೆ ಮಾಡದಂತೆ ಕೇಂದ್ರ ಷಡ್ಯಂತ್ರ ಮಾಡ್ತಿದೆ ಅಂತ ಗಂಭೀರ ಆರೋಪ ಮಾಡಿದ್ದು, ಬಿಜೆಪಿ ನಾಯಕರು ಗರಂ ಆಗಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಅಕ್ಕಿ ಪಾಲಿಟಿಕ್ಸ್ ಜೋರಾಗಿರೋ ನಡುವೆಯೇ ಖುದ್ದು ಸಿದ್ದರಾಮಯ್ಯನವರೇ ಪ್ರಧಾನಿ ಮೋದಿಯವ್ರನ್ನ ಭೇಟಿಯಾಗೋಕೆ ಮುಂದಾಗಿದ್ದಾರೆ. ಹೈಕಮಾಂಡ್‌ ಭೇಟಿಗಾಗಿ ಜೂನ್‌ 21 ರಂದು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಅವಕಾಶ ಸಿಕ್ಕರೆ ಮೋದಿ ಹಾಗೂ ರಾಷ್ಟ್ರಪತಿಗಳನ್ನೂ ಭೇಟಿಯಾಗಿ ಬರಲಿದ್ದಾರೆ ಎನ್ನಲಾಗಿದೆ. ಸೌಜನ್ಯ ಭೇಟಿ ವೇಳೆ ರಾಜ್ಯದ ವಿಚಾರಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅದ್ರಲ್ಲೂ ಮುಖ್ಯವಾಗಿ ಅನ್ನಭಾಗ್ಯಕ್ಕೆ ನೀಡುವ ಅಕ್ಕಿ ಬಗ್ಗೆ ಚರ್ಚೆ ನಡೆಸಲಿದ್ದು, ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಅಂತ ತಿಳಿದು ಬಂದಿದೆ. ಇತ್ತ ಅಕ್ಕಿ ಸರಬರಾಜು ವಿಷಯದಲ್ಲಿ ರಾಜಕಾರಣ ಮಾಡ್ತಿರೋ ಕಾಂಗ್ರೆಸ್, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸ್ತಿದೆ. ಈಗಾಗಲೇ ನೀಡಿರುವ ಭರವಸೆಯಂತೆ ಜುಲೈನಲ್ಲಿ ಜನರಿಗೆ 10 ಕೆಜಿ ಅಕ್ಕಿ ನೀಡದಿದ್ರೆ, ಜನರನ್ನ ಸಂಘಟಿಸಿ ಹೋರಾಟ ಮಾಡ್ತೇವೆ ಅಂತ ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

-masthmagaa.com

Contact Us for Advertisement

Leave a Reply