ಪತ್ನಿ ಮಕ್ಕಳ ಜೊತೆ ರಿಷಬ್‌ ಶೆಟ್ಟಿ ಭರ್ಜರಿ ಪೋಟೋಶೂಟ್‌ !

masthmagaa.com:

ಸ್ಯಾಂಡಲ್‌ವುಡ್‌ನ ಖ್ಯಾತ ನಟ ರಿಷಬ್‌ ಶೆಟ್ಟಿ ಕುಟುಂಬದೊಂದಿಗೆ ಸುಂದರವಾದ ಪೋಟೋಶೂಟ್‌ ಮಾಡಿಕೊಂಡಿದ್ದಾರೆ. ರಿಷಬ್‌ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಈ ಪೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಫ್ಯಾಮಿಲಿ ಎಂದು ಕ್ಯಾಪ್ಷನ್ ನೀಡಿದ್ದಾರೆ.

ರಿಷಬ್‌ ಶೆಟ್ಟಿ ಕುಟುಂಬದೊಂದಿಗೆ ಹಸಿರಾದ ಪ್ರಕೃತಿಯ ಮಧ್ಯೆ ನಿಂತು ಪೋಟೋಗೆ ಪೋಸ್‌ ಕೊಟ್ಟಿದ್ದಾರೆ. ಎಲ್ಲರೂ ಹಳದಿ ಬಣ್ಣದ ಬಟ್ಟೆ ತೊಟ್ಟು ಮಿಂಚಿದ್ದಾರೆ. ಇಬ್ಬರೂ ಮಕ್ಕಳು ತುಂಬಾ ಕ್ಯೂಟ್‌ ಆಗಿ ಕಾಣಿಸುತ್ತಿದ್ದಾರೆ.

ರಿಷಬ್ ಶೆಟ್ಟಿ ಸುಂದರ ಫೋಟೋಗಳು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಿಷಬ್ ಕುಟುಂಬಕ್ಕೆ ಲೈಕ್ಸ್ ಒತ್ತಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಕರ್ಲಿ ಫ್ಯಾಮಿಲಿ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಸದ್ಯ ಕಾಂತಾರ-2ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ರಿಷಬ್ ಕಾಂತಾರ – 2 ಸ್ಕ್ರಿಪ್ಟ್‌ನಲ್ಲಿ ನಿರತರಾಗಿದ್ದಾರೆ. ಈ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿದ್ದರು. ಸದ್ಯದಲ್ಲೇ ಶೂಟಿಂಗ್ ಪ್ರಾರಂಭಿಸುವ ಸಾಧ್ಯತೆ ಇದೆ.

-masthmagaa.com

Contact Us for Advertisement

Leave a Reply