ಮಸ್ಕಿ, RR ನಗರ ಉಪಚುನಾವಣೆ ಘೋಷಿಸಿಲ್ಲ ಯಾಕೆ..?

ರಾಜ್ಯದಲ್ಲಿ ಒಟ್ಟು 17 ಕ್ಷೇತ್ರಗಳು ತೆರವಾಗಿದ್ದರೂ 15 ಕ್ಷೇತ್ರಗಳಿಗೆ ಮಾತ್ರವೇ ಉಪಚುನಾವಣೆ ಘೋಷಣೆ ಮಾಡಲಾಗಿದೆ. ಆದ್ರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿಲ್ಲ. ಅದಕ್ಕೆ ಒಬ್ಬೊಬ್ಬರು ಒಂದೊಂದು ಕಾರಣಗಳನ್ನು ಹೇಳುತ್ತಿದ್ದಾರೆ. ಆದ್ರೆ ಇದಕ್ಕೆ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರೇ ಉತ್ತರಿಸಿದ್ದಾರೆ. ಕಳೆದ 2018ರ ಚುನಾವಣೆಯ ಸಂದರ್ಭದಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿಯ ಅಪಾರ್ಟ್ ಮೆಂಟಲ್ಲಿ ಸಾವಿರಾರು ಗುರುತಿನ ಚೀಟಿ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಪರಾಜಿತ ಅಭ್ಯರ್ಥಿ ಪಿ.ಎಂ ಮುನಿರಾಜುಗೌಡ 7ನೇ ಎಸಿಎಂಎಂ ಕೋರ್ಟ್ ಮೆಟ್ಟಿಲೇರಿದ್ದು, ಇದೇ ಕಾರಣಕ್ಕೆ ರಾಜರಾಜೇಶ್ವರಿನಗರದ ಚುನಾವಣೆ ತಡೆಹಿಡಿಯಲಾಗಿದೆ ಎಂದು ಚುನಾವಣಾಧಿಕಾರಿ ಹೇಳಿದರು.

ಇನ್ನು ಮಸ್ಕಿ ಕ್ಷೇತ್ರದಲ್ಲಿ ಬೋಗಸ್ ಮತದಾನದ ಆರೋಪ ಕೇಳಿಬಂದಿತ್ತು. ಪ್ರತಾಪ್ ಗೌಡ ಪಾಟೀಲ್ ವಿರುದ್ಧ 213 ಮತಗಳಿಂದ ಸೋತಿದ್ದ ಬಿಜೆಪಿಯ ಬಸನಗೌಡ ತುರ್ವಿಹಾಳ ಅವರು ಕೋರ್ಟಿನಲ್ಲಿ ದೂರು ದಾಖಲಿಸಿದ್ದಾರೆ. ಪ್ರತಾಪ್ ಗೌಡ ಪುತ್ರಿ ವಿದೇಶದಲ್ಲಿದ್ದರು ಕೂಡ ಅವರ ಮತ ಚಲಾವಣೆಯಾಗಿತ್ತು. ಹೀಗಾಗಿ ಶಾಸಕತ್ವ ಅಸಿಂಧುಗೊಳಿಸುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವೂ ಕೋರ್ಟ್‍ನಲ್ಲಿ ಬಾಕಿ ಇರೋದರಿಂದ ಈ ಮಸ್ಕಿ ಕ್ಷೇತ್ರದ ಉಪಚುನಾವಣೆ ಘೋಷಿಸಿಲ್ಲ.

Contact Us for Advertisement

Leave a Reply