RSS ವಾರ್ಷಿಕೋತ್ಸವದಲ್ಲಿ ಮೋಹನ್ ಭಾಗವತ್ ಹೇಳಿದ್ದೇನು..?

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕೋತ್ಸವದಲ್ಲಿ ಮುಖ್ಯಸ್ಥ ಮೋಹನ್ ಭಾಗವತ್ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ. ಇದೇ ವೇಳೆ ಗುಂಪು ಹಲ್ಲೆಗೂ RSSಗೂ ಯಾವುದೇ ಸಂಬಂಧವಿಲ್ಲ. ಗುಂಪು ಹಲ್ಲೆ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಸಂಘದ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಗುಂಪು ಹತ್ಯೆ ಅನ್ನೋದು ಪಾಶ್ಚಿಮಾತ್ಯ ಪದ. ಇದು ಭಾರತದೆ ಪದವಲ್ಲ. ಯಾಕಂದ್ರೆ ಭಾರತದಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಲೇ ಇರಲಿಲ್ಲ ಎಂದಿದ್ದಾರೆ.

ಅಲ್ಲದೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದು, ಕೇಂದ್ರ ಸರ್ಕಾರದ ಸಾಹಸದ ಹೆಜ್ಜೆಯಾಗಿದೆ. ಅಲ್ಲದೆ ದೇಶದಲ್ಲಿ ಭಯೋತ್ಪಾದನೆಯೂ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕೆಲವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಗೊತ್ತಿಲ್ಲದೆ ಬಾಯಿಗೆ ಬಂದಂತೆ ಅಪಪ್ರಚಾರ ಮಾಡುತ್ತಾರೆ. ಇಮ್ರಾನ್ ಖಾನ್ ಕೂಡ ಇದನ್ನೇ ಕಲಿತಿದ್ದಾರೆ ಎಂದು ಕಿಡಿಕಾರಿದ್ರು.

Contact Us for Advertisement

Leave a Reply