ರಾಗಿಣಿ ದ್ವಿವೇದಿಗೆ ಮತ್ತೆ ಸಂಕಷ್ಟ: ಸೆ.​ 12ರವರೆಗೂ ಸಿಸಿಬಿ ಕಸ್ಟಡಿ

masthmagaa.com:

ಸ್ಯಾಂಡಲ್​ವುಡ್​ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ನಟಿ​ ರಾಗಿಣಿಯ ಕಸ್ಟಡಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಡ್ರಗ್ಸ್ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ರಾಗಿಣಿಯನ್ನು ಮತ್ತೆ 10 ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಸಿಬಿ ಪೊಲೀಸರು ಕೋರ್ಟ್​ಗೆ ಮನವಿ ಮಾಡಿದ್ದರು. ಆದ್ರೆ 10 ದಿನದ ಬದಲು 5 ದಿನಗಳ ಕಾಲ ಕಸ್ಟಡಿಯನ್ನು ವಿಸ್ತರಿಸಲಾಗಿದೆ. ಈ ಮೂಲಕ ಈಗಾಗಲೇ ಸಾಕಷ್ಟು ವಿಚಾರಣೆ ಎದುರಿಸಿರುವ ‘ತುಪ್ಪದ ಬೆಡಗಿ’ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.

-masthmagaa.com

Contact Us for Advertisement

Leave a Reply