ಅನರ್ಹ ಶಾಸಕರು ಸ್ಪರ್ಧಿಸುವಂತಿಲ್ಲ: ಚುನಾವಣಾ ಆಯೋಗ

ರಾಜ್ಯ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ. ಚುನಾವಣೆ ನಡೆಯೋ ಕ್ಷೇತ್ರಗಳ ಜಿಲ್ಲಾ ವ್ಯಾಪ್ತಿಯಲ್ಲಿ ಇಂದಿನಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದೆ ಅಂತ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಉಪಚುನಾವಾಣೆ ದಿನಾಂಕ ಘೋಷಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. 15 ಕ್ಷೇತ್ರಗಳಲ್ಲಿ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೆರೆ ಪರಿಹಾರ ನೀಡಿದರೂ ಅದರಲ್ಲಿ ರಾಜಕೀಯ ನಾಯಕರ ಪಾತ್ರ ಇರಬಾರದು ಅಂತ ಮಾಹಿತಿ ನೀಡಿದ್ರು. ಇನ್ನು ಮಸ್ಕಿ, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ತಕರಾರು ಅರ್ಜಿ ಇರುವ ಕಾರಣ ಉಪ ಚುನಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Contact Us for Advertisement

Leave a Reply