ಕೊರೋನಾ ಟೆಸ್ಟ್‌ಗೆ ಏಕರೂಪ ದರ ನಿಗದಿ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

masthmagaa.com:

ಕೊರೋನಾ ಸೋಂಕು ಪತ್ತೆಗಾಗಿ ನಡೆಸುವ ‘ಆರ್‌ಟಿ-ಪಿಸಿಆರ್‌’ ಪರೀಕ್ಷೆಗೆ ದೇಶದಾದ್ಯಂತ ಏಕರೂಪದ ದರ ನಿಗದಿಪಡಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(ಪಿಐಎಲ್‌) ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಕೇಳಿದೆ.

ಈ ಕುರಿತು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನೋಟಿಸ್‌ ನೀಡಿ, 2 ವಾರದೊಳಗೆ ಉತ್ತರಿಸುವಂತೆ ಹೇಳಿದೆ.  ಏಕ ರೂಪ ದರ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಅಜಯ್ ಅಗ್ರವಾಲ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ದೇಶದ ಮಾರುಕಟ್ಟೆಯಲ್ಲಿ ಆರ್‌ಟಿ-ಪಿಸಿಆರ್‌ ಕಿಟ್‌ 200ರೂ.ಗೆ ಲಭ್ಯವಿದ್ದರೂ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪರೀಕ್ಷೆಗೆ ₹900 ರಿಂದ ₹2800ವರೆಗೆ ದರ ನಿಗದಿಪಡಿಸಲಾಗಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ದರವಿದೆ. ಇದರ ಬದಲಿಗೆ ದೇಶಾದ್ಯಂತ ಏಕರೂಪವಾಗಿ ₹400 ದರ ನಿಗದಿಪಡಿಸಬೇಕು. ಈ ಕುರಿತು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಅಂತ ಅರ್ಜಿಯಲ್ಲಿ ಮನವಿ ಮಾಡಿದ್ದರು.

-masthmagaa.com

Contact Us for Advertisement

Leave a Reply