ಕಾವೇರಿ ನದಿ ವಿವಾದ: ಅರ್ಜಿ ವಿಚಾರಣೆಗೆ ಪ್ರತ್ಯೇಕ ಪೀಠ ರಚಿಸಲು ಮುಂದಾದ ಸುಪ್ರೀಂಕೋರ್ಟ್‌

masthmagaa.com:

ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಮತ್ತೆ ವಿವಾದಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ವಿಚಾರಣೆಗೆ ಪ್ರತ್ಯೇಕ ಪೀಠ ರಚಿಸೋದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ನಿರ್ದೇಶನಗಳನ್ನ ನೀಡ್ಬೇಕು ಅಂತ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಹಿನ್ನಲೆಯಲ್ಲಿ ಸಿಜೆಐ ಡಿವೈ ಚಂದ್ರಚೂಡ್ ಅವರು ತಮಿಳುನಾಡಿನ ಅರ್ಜಿಯ ವಿಚಾರಣೆಗೆ ಇಂದೇ ಪೀಠವನ್ನು ರಚಿಸಲು ಸೂಚನೆ ನೀಡಿದ್ದಾರೆ. ಇತ್ತ ತಮಿಳುನಾಡಿಗೆ ಕಾವೇರಿ ನೀರುವ ಬಿಡುವ ಸರ್ಕಾರದ ನಡೆ ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ಮಂಡ್ಯದ ಸಂಜಯ್ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆದಿದ್ದು, ಇದರಲ್ಲಿ ಸಂಸದೆ ಸುಮಲತಾ, ಮಾಜಿ ಸಿಎಂ ಸದಾನಂದಗೌಡ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ. ಇನ್ನೊಂದ್‌ ಕಡೆ ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಅಂತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply