ಪಠ್ಯಪುಸ್ತಕ ಪರಿಷ್ಕರಣೆಗೆ ತಜ್ಞರ ಸಮಿತಿ ನೇಮಕ!

masthmagaa.com:

ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ 5 ಸಮಿತಿಗಳನ್ನ ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿವರೆಗಿನ ಕನ್ನಡ ಪ್ರಥಮ ಹಾಗೂ ದ್ವಿತೀಯ ಭಾಷೆ, 9 ಮತ್ತು 10ನೇ ತರಗತಿಯ ಕನ್ನಡ ತೃತೀಯ ಭಾಷೆಯ ಪಠ್ಯ ಪುಸ್ತಕಗಳು ಹಾಗೂ 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳ ಪರಿಷ್ಕರಣೆ ಸಂಬಂಧ ಸಮಿತಿಗಳನ್ನ ರಚಿಸಲಾಗಿದೆ. ಪರಿಷ್ಕರಣೆ ಕುರಿತು ಶೈಕ್ಷಣಿಕ ಮಾರ್ಗದರ್ಶನ ಹಾಗೂ ಸಲಹೆ ನೀಡಲು ಉತ್ತರ ಕನ್ನಡ ಜಿಲ್ಲೆಯ ಡಾ. ಮಂಜುನಾಥ ಜಿ ಹೆಗ್ಡೆ ಅವ್ರನ್ನ ಮುಖ್ಯ ಸಂಯೋಜಕರನ್ನಾಗಿ ನೇಮಿಸಿ ಇಲಾಖೆ ಆದೇಶ ಹೊರಡಿಸಿದೆ. 2024-25ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಪಠ್ಯ ಪುಸ್ತಕಗಳು ಸಿದ್ದವಾಗಬೇಕಿವೆ. ಈ ಹಿನ್ನೆಲೆ ಪರಿಷ್ಕರಣೆ ಕಾರ್ಯವನ್ನ ಬೇಗನೇ ಮುಗಿಸಿ ವರದಿ ಸಲ್ಲಿಸುವಂತೆ ರಾಜ್ಯ ಪಠ್ಯಪುಸ್ತಕ ಸಂಘ ಕೋರಿತ್ತು. ಅದ್ರಂತೆ 2005ರ ಮಾರ್ಗಸೂಚಿಯಂತೆ ಪರಿಷ್ಕರಣೆ ನಡೆಸಲು ಸಮಿತಿ ರಚಿಸಲಾಗಿದೆ. ಈ ಸಮಿತಿ ಮುಂದಿನ 3 ತಿಂಗಳಲ್ಲಿ ತನ್ನ ವರದಿ ಸಲ್ಲಿಸಲಿದೆ ಎನ್ನಲಾಗಿದೆ.

-masthmagaa.com

Contact Us for Advertisement

Leave a Reply