ಕಾಂತಾರ ಸಿನಿಮಾದಲ್ಲಿ ಬರುವ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ: ಚೇತನ್ ಅಹಿಂಸಾ ಅಪಭೃಂಶ ಹೇಳಿಕೆ!

masthmagaa.com:

ನಟ ರಿಷಬ್‌ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ವಿಶ್ವಮಟ್ಟದಲ್ಲಿ ತೆರೆಕಂಡು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಇವತ್ತಿಗೆ 100 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿ ಮುನ್ನುಗುತ್ತಿದೆ. ಮೊದಲು ಕನ್ನಡದಲ್ಲಿ ರಿಲೀಸ್ ಆಗಿ, 15 ದಿನಗಳ ನಂತರ ಪರಭಾಷೆಗೂ ಡಬ್ ಆಗಿ ಈಗ ಪರಭಾಷೆಯ ಸ್ಟಾರ್ ನಟರು ಕೂಡ ಈ ಸಿನಿಮಾವನ್ನ ಮೆಚ್ಚಿಕೊಂಡು ಕೊಂಡಾಡುತ್ತಿದ್ದಾರೆ.

ಸಧ್ಯಕ್ಕೆ ಕನ್ನಡದ ನಟ ಚೇತನ್ ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ..’ ಎಂದು ಹೊಗಳಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿ ಅವರ ಹೇಳಿಕೆಯೊಂದಕ್ಕೆ ಆಕ್ಷೇಪವನ್ನ ಎತ್ತಿದ್ದಾರೆ.
ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ..’ ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ ಗೆ ಜನ ಯದ್ವ ತದ್ವ ಛೀಮಾರಿ ಹಾಕಿದ್ದು ಪ್ರಚಾರದ ಹಂಗಿಗೆ ಬಿದ್ದು ಹಿಂದುತ್ವವನ್ನೇ, ಹಿಂದೂ ಆಚಾರ ವಿಚಾರಗಳನ್ನೇ ತಿರುಚುವ ಇಂಥ ಕೀಳುಮಟಕ್ಕೆ ಇಳಿದಿರುವ ನೀನು ಮೊದಲಿಗೆ ಭಾರತೀಯನೇ ಅಲ್ಲ, ಯಾವುದೋ ಪರದೇಶದಲ್ಲಿ ಹುಟ್ಟಿ ಎಲ್ಲೋ ಬೆಳೆದು ಇಲ್ಲಿನ ಆಚರಣೆಗಳ ಬಗ್ಗೆ ಕಾಮೆಂಟ್ ಮಾಡುವ ಯೋಗ್ಯತೆ ನಿನಗಿಲ್ಲ ಅಂತ ಜನ ಉಗಿದು ಉಪ್ಪಿನಕಾಯಿ ಹಾಕಿದ್ದಾರೆ.
-masthmagaa.com
Contact Us for Advertisement

Leave a Reply