ರಾಜ್ಯದ್ಯಾಂತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

masthmagaa.com:

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬಹುತೇಕ ಬರಗಾಲ ಉಂಟಾಗಿದೆ. ಜುಲೈ ಆರಂಭದಲ್ಲಿ ಉತ್ತಮ ಮಳೆಯಾಗಿದ್ದು, ಬಿಟ್ರೆ ಆಗಸ್ಟ್‌ನಲ್ಲಿ ಬೇಸಿಗೆಯ ರೀತಿಯ ಬಿರು ಬಿಸಿಲಿದೆ ರಾಜ್ಯದ ಜನ ಬಳಲಿ ಹೋಗಿದ್ದಾರೆ. ಆದ್ರೆ ರಾಜ್ಯದ ಜನರ ಮೇಲೆ ವರುಣ ಕೊಂಚ ಕೃಪೆ ತೋರಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅಂದ್ಹಾಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ 22 ರಷ್ಟು ಕಡಿಮೆ ಮಳೆಯಾಗಿದೆ.

-masthmagaa.com

Contact Us for Advertisement

Leave a Reply