ದೇಶಾದ್ಯಂತ ಮಳೆ ಅಬ್ಬರ: ಪ್ರವಾಹ ಭೀತಿಯಲ್ಲಿ ಉತ್ತರ ಭಾರತ

masthmagaa.com:

ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಅತಿಹೆಚ್ಚು 126 ಮಿಲಿ ಮೀಟರ್‌ ಮಳೆಯಾಗಿದೆ. ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ 13ರವರೆಗೂ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಆಗಾಗ ಮಳೆಯಾಗಲಿದೆ ಅಂತ ತಿಳಿಸಲಾಗಿದೆ. ಇನ್ನು ಉತ್ತರ ಭಾರತದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿ.ಮೀ ಮಳೆ ದಾಖಲಾಗಿದ್ದು, 1982ರಿಂದ ಇಲ್ಲಿಯವರೆಗೆ ಸುರಿದ ಅತ್ಯಧಿಕ ಮಳೆಯಾಗಿದೆ ಅಂತ ತಿಳಿದು ಬಂದಿದೆ. ಜೊತೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನ ಮೃತಪಟ್ಟಿದ್ದಾರೆ. ಅಲ್ದೆ ಮುಂದಿನ ಕೆಲವು ದಿನಗಳವರೆಗೆ ವಾಯುವ್ಯ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೊಂದ್‌ ಕಡೆ ಕೇರಳದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಒಂದು ವಾರದೊಳಗೆ 10 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಜೊತೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 19 ಜನರು ಸಾವನ್ನಪ್ಪಿದ್ದಾರೆ ಅಂತ ಕೇರಳ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ಮತ್ತೊಂದ್‌ ಕಡೆ ಜಮ್ಮು- ಕಾಶ್ಮೀರದಲ್ಲಿ ಸುರಿತಿರೋ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಇಬ್ಬರು ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ಇಬ್ಬರು ಯೋಧರ ಮೃತದೇಹಗಳು ಸಿಕ್ಕಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply