ಶಿವಮೊಗ್ಗಕ್ಕೆ ಡೈನಾಮೈಟ್​ ಸಪ್ಲೈ ಮಾಡಿದವ ಮತ್ತು ಕ್ವಾರಿ ಮಾಲೀಕ ಅರೆಸ್ಟ್!

masthmagaa.com:

ಶಿವಮೊಗ್ಗದ ಹುಣಸೋಡು ಬಳಿಯ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್​​‌ ಸ್ಫೋಟಕ್ಕೆ ಸಂಬಂಧಿಸಿದಂತೆ ಕ್ವಾರಿ ಮಾಲೀಕ ಮತ್ತು ಡೈನಾಮೈಟ್​ ಸಪ್ಲೈ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ ಅಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಘಟನೆಗೆ ಕ್ವಾರಿ ಮಾಲೀಕ ಮತ್ತು ಆಪರೇಟರ್​ಗಳ ನಿರ್ಲಕ್ಷ್ಯ ಕೂಡ ಕಾರಣ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ಸೇರಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪರಿಹಾರ ಘೋಷಣೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ ಕೈಗೊಳ್ತಾರೆ. ಪ್ರಾಥಮಿಕ ಮಾಹಿತಿ ಪ್ರಕಾರ 7 ಜನ ಮೃತಪಟ್ಟಿದ್ದಾರೆ. ಘಟನಾ ಸ್ಥಳವನ್ನ ಕ್ಲಿಯರ್ ಮಾಡಿದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯ ಅಂತ ಗೃಹ ಸಚಿವರು ಹೇಳಿದ್ದಾರೆ.

ಇನ್ನು ಸಿಎಂ ಯಡಿಯೂರಪ್ಪ ಮಾತನಾಡಿ, ಡೈನಾಮೈಟ್​ ಸ್ಫೋಟದಲ್ಲಿ ಐವರು ಮೃತಪಟ್ಟಿದ್ದಾರೆ. ನಾಳೆ ನಾನು ಘಟನಾ ಸ್ಥಳಕ್ಕೆ ಹೋಗ್ತೀನಿ. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಛಿದ್ರ ಛಿದ್ರ ಆಗಿರೋದ್ರಿಂದ ಎಷ್ಟು ಜನ ಮೃತಪಟ್ಟಿದ್ದಾರೆ ಅನ್ನೋ ಬಗ್ಗೆ ಗೊಂದಲ ಮುಂದುವರಿದಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಇಬ್ಬರ ಮೃತದೇಹ ಸಿಕ್ಕಿದೆ ಅಂದ್ರೆ, ಮುಖ್ಯಮಂತ್ರಿಗಳು 5 ಜನ ಮೃತಪಟ್ಟಿದ್ದಾರೆ ಅಂತಿದ್ದಾರೆ, ಗೃಹ ಸಚಿವರು 7 ಜನ ಅಂತಿದ್ದಾರೆ.

-masthmagaa.com

Contact Us for Advertisement

Leave a Reply