ಶಿಕ್ಷಣ ಸಚಿವರ ತವರಿನಲ್ಲೇ ಶಾಲಾ ಮಕ್ಕಳಿಂದ ಟಾಯ್ಲೆಟ್‌ ಕ್ಲೀನಿಂಗ್!

masthmagaa.com:

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೈಲಿ ಶಾಲಾ ಶೌಚಾಲಯಗಳ ಕ್ಲೀನ್‌ ಮಾಡ್ಸೊ ಹೀನ ಕೃತ್ಯಗಳು ಒಂದೊಂದಾಗಿ ಬೆಳಕಿಗೆ ಬರ್ತಿವೆ. ಇದೀಗ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವ್ರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಇಂತದ್ದೊಂದು ಪ್ರಕರಣ ನಡೆದಿದೆ. ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದ ನೇರಲಕೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಶೌಚಾಲಯ ಸ್ವಚ್ಚ ಮಾಡೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆಂಜಿನಪ್ಪ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

-masthmagaa.com

Contact Us for Advertisement

Leave a Reply